ಭಾರತದಲ್ಲಿ ಶೀಘ್ರವೇ ವಿದೇಶಿ ಪ್ರಜೆಗಳಿಗಾಗಿ ಪರಿಚಯವಾಗಲಿದೆ ವಿಶೇಷ ವೀಸಾ ವರ್ಗ: ಪ್ರಧಾನಿ ಮೋದಿ

ಹೊಸದಿಗಂತ ವರದಿ,ಮೈಸೂರು:

ಭಾರತದಲ್ಲಿ ಮುಂದಿನ ದಿನಗಳಲ್ಲಿ ಆಯುಷ್ ಚಿಕಿತ್ಸಾ ಕ್ರಮಗಳನ್ನು ಪಡೆಯಲು ಬರಲು ಬಯಸುವ ವಿದೇಶಿ ಪ್ರಜೆಗಳಿಗೆ ವಿಶೇಷ ವೀಸಾ ವರ್ಗವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಇಂದು ಮೂರು ದಿನಗಳ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯ (Global AYUSH Investment and Innovation Summit) ಉದ್ಘಾಟನಾ ಸಮಾರಂಭವನ್ನುದ್ದೇಶಿ ಮಾತನಾಡುತ್ತಿದ್ದ ಮೋದಿ, . ಆಯುಷ್- ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯನ್ನು ಸೂಚಿಸುತ್ತದೆ. ಮುಂದಿನ ದಿನಗಳಲ್ಲಿ ಭಾರತವು ಆಯುಷ್ ಮಾರ್ಕ್ ಅನ್ನು ಪರಿಚಯಿಸಲಿದೆ. ಇದು ದೇಶದ ಗುಣಮಟ್ಟದ ಆಯುಷ್ ಉತ್ಪನ್ನಗಳಿಗೆ ಅಧಿಕೃತೆಯನ್ನು ನೀಡುತ್ತದೆ . ಇದು ವಿಶ್ವದ ಜನರು ಗುಣಮಟ್ಟದ ಆಯುಷ್ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ ಎಂಬ ವಿಶ್ವಾಸವನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು.
ದೇಶವು ಆಯುಷ್ ಔಷಧಿಗಳು, ಪೂರಕಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆಯಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. ಇದಕ್ಕೆ ಸೂಕ್ತ ಉದಾಹರಣೆ ಅಂದರೆ 2014ರ ಮೊದಲು ಆಯುಷ್ ವಲಯವು 3 ಬಿಲಿಯನ್ ಡಾಲರ್ ಗಿಂತ ಕಡಿಮೆಯಿತ್ತು, ಇಂದು ಅದು ಕೂಡ 18 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ಹೇಳಿದ್ದಾರೆ.
ಆಯುಷ್ ಶೃಂಗಸಭೆಯಲ್ಲಿ ಮಾರಿಷಸ್‌ನ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!