ಮಡಿಕೇರಿ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿಯ ದೀರ್ಘಾಯುಷ್ಯಕ್ಕಾಗಿ ವಿಶೇಷ ಪೂಜೆ

ಹೊಸದಿಗಂತ ವರದಿ,ಮಡಿಕೇರಿ:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲೆಂದು ಪ್ರಾರ್ಥಿಸಿ ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಮಡಿಕೇರಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಡಿಕೇರಿ ಓಂಕಾರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶರೀನ್ ಸುಬ್ಬಯ್ಯ, ಜಿಲ್ಲಾ ಪ್ರಬಾರಿ ಭಾಗೀರಥಿ ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಕೇಶ್, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ಬೆಳ್ಯಪ್ಪ ಹಾಗೂ ನಗರಸಭೆಯ ಬಿಜೆಪಿ ಸದಸ್ಯರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!