ಹೊಸದಿಗಂತ ವರದಿ, ವಿಜಯನಗರ:
ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ೩೨ನೇ ನುಡಿಹಬ್ಬ(ಘಟಿಕೋತ್ಸವ)ದ ನಿಮಿತ್ತ ನಾಡಿನ ಮೂವರು ಗಣ್ಯರಿಗೆ ಪ್ರತಿಷ್ಟಿತ ನಾಡೋಜ ಪದವಿ ನೀಡಿ, ಗೌರವಿಸಲಾಯಿತು.
ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಜಿಲ್ಲೆಯ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದೇವರು, ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ. ತೇಜಸ್ವಿ ವಿ. ಕಟ್ಟಿಮನಿ, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ವಿಜ್ಞಾನ ಕ್ಷೇತ್ರದ ನ್ಯಾನೋ ಟೆಕ್ನಾಲಜಿ ವಿದ್ವಾಂಸರ ಡಾ.ಎಸ್.ಸಿ. ಶರ್ಮಾ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಲಾಯಿತು.
ಇದೇ ವೇಳೆ ಒಬ್ಬರಿಗೆ ಡಿ.ಲಿಟ್ ಸೇರಿದಂತೆ ೨೭೫ ಜನ ಸಂಶೋಧಕರಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಅನಂತಪುರನ ಆಂಧ್ರ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ.ಕೋರಿ, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹಾಗೂ ವಿವಿಧ ನಿಕಾಯಗಳ ಡೀನ್ ರು ಉಪಸ್ಥಿತರಿದ್ದರು.