January22, 2026
Thursday, January 22, 2026
spot_img

ಮಕ್ಕಳ ಭವಿಷ್ಯಕ್ಕೆ ವೇಗ: 18 ಸಾವಿರ ಶಿಕ್ಷಕರ ನೇಮಕಕ್ಕೆ ಮಧು ಬಂಗಾರಪ್ಪ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನಿವಾರಿಸಲು ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸರ್ಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6,000 ಸೇರಿದಂತೆ ಒಟ್ಟು 18,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಗರದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಈ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಮುಗಿಸಲಾಗುವುದು ಎಂದು ತಿಳಿಸಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಕ್ಕಳನ್ನು ಸ್ವಾಗತಿಸಲು ಈ ಹೊಸ ಶಿಕ್ಷಕರು ಹಾಜರಿರುತ್ತಾರೆ ಎಂದು ಭರವಸೆ ನೀಡಿದ್ದಾರೆ.

ಸಚಿವರ ಹೇಳಿಕೆಯ ಪ್ರಕಾರ, ಈ ಪ್ರಸ್ತುತ ನೇಮಕಾತಿಗಳು ಮತ್ತು ಇತರೆ ಪ್ರಕ್ರಿಯೆಗಳನ್ನು ಸೇರಿಸಿದರೆ ಒಟ್ಟು 32,000 ಶಿಕ್ಷಕರ ನೇಮಕಾತಿ ಆದಂತೆ ಆಗುತ್ತದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 5,000ಕ್ಕಿಂತ ಕಡಿಮೆ ಶಿಕ್ಷಕರ ನೇಮಕಾತಿ ಆಗಿತ್ತು ಎಂದು ಉಲ್ಲೇಖಿಸಿದ ಅವರು, ಮಕ್ಕಳ ಹಿತದೃಷ್ಟಿಯಿಂದ ಈ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಈ ಬೃಹತ್ ನೇಮಕಾತಿ ಮಹತ್ವದ್ದಾಗಿದೆ.

Must Read