ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಇಡುಕ್ಕಿ ಜಿಲ್ಲೆಯ ಕಟ್ಟಪ್ಪಣ್ಣ ಎಂಬಲ್ಲಿ ಶುಕ್ರವಾರ ನಡೆದ ಬೈಕ್ ಅಪಘಾತವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಚಲನಚಿತ್ರಗಳಲ್ಲಿ ತೋರಿಸುವಂತೆ ಬೈಕ್ ಗಾಳಿಯಲ್ಲಿ ಎಗರಿ ಪಕ್ಕದಲ್ಲಿದ್ದ ಕರೆಂಟ್ ಟ್ರಾನ್ಸ್‌ಫಾರ್ಮರ್ ಬೇಲಿಯ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ ಎಂದು ಸ್ಥಳೀಯರು ನಿಟ್ಟುಸಿರುಬಿಟ್ಟದ್ದಾರೆ.
ಕಟ್ಟಪ್ಪಣ್ಣನ ವೆಳ್ಳಯಂಕುಡಿ ಎಂಬಲ್ಲಿ ಬೈಕ್‌ನಲ್ಲಿ ವೇಗವಾಗಿ ಬರುತ್ತಿದ್ದ ಯುವಕನೊಬ್ಬ ಸ್ಕಿಡ್ ಆಗಿ ಬಿದ್ದಿದ್ದಾನೆ. ಬೈಕ್ ವೇಗಕ್ಕೆ ಎದುರಿಗಿದ್ದ ಕರೆಂಟ್ ಟ್ರಾನ್ಸ್ ಫಾರ್ಮರ್ ಸುತ್ತಲೂ ಹಾಕಿದ್ದ ಬೇಲಿಯೊಳಗೆ ಬಿದ್ದಿದೆ. ಅದೃಷ್ಟವಶಾತ್ ಸವಾರನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ವಿದ್ಯುತ್ ಇಲಾಖೆ ಅಧಿಕಾರಿಗಳು ಆ ಪ್ರದೇಶದಲ್ಲಿ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಬೈಕ್ ಹೊರತೆಗೆದು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.