ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇಗವಾಗಿ ಬಂದ ಥಾರ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಇಂದು ಮುಂಜಾನೆ 4:30ರ ಸುಮಾರಿಗೆ ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಆರು ಮಂದಿ ಕೆಲಸದ ನಿಮಿತ್ತ ಉತ್ತರ ಪ್ರದೇಶದಿಂದ ಗುರುಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದೆ.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭೀಕರ ಅಪಘಾತದ ಪರಿಣಾಮ ಥಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.