ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಚುರುಕಾಗಿದ್ದು, ಎರಡು ದಿನಗಳಲ್ಲಿ 1 ಲಕ್ಷದ 19 ಸಾವಿರ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ.
ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ. ನಿನ್ನೆ 5 ನಗರ ಪಾಲಿಕೆಗಳಲ್ಲಿ 95,024 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಮೊದಲ ದಿನ 24,453 ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಎರಡನೇ ದಿನ 95 ಸಾವಿರದ 24 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಕೇಂದ್ರ ನಗರ ಪಾಲಿಕೆ 14 ಸಾವಿರದ 288 ಮನೆ, ಪೂರ್ವ ನಗರ ಪಾಲಿಕೆ 17 ಸಾವಿರದ 269 ಮನೆ, ಉತ್ತರ ನಗರ ಪಾಲಿಕೆ 31 ಸಾವಿರದ 363 ಮನೆ, ದಕ್ಷಿಣ ನಗರ ಪಾಲಿಕೆ 16 ಸಾವಿರದ 445 ಮನೆ, ಪಶ್ಚಿಮ ನಗರ ಪಾಲಿಕೆಯಲ್ಲಿ 40 ಸಾವಿರದ 112 ಮನೆಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ.
ರಾಜ್ಯದಲ್ಲಿ ನಿನ್ನೆಯವರೆಗೆ ಶೇಕಡ 76.41 ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣವಾಗಿದೆ. ರಾಜ್ಯದಲ್ಲಿ ಒಟ್ಟು 1 ಕೋಟಿ 09 ಲಕ್ಷ ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ನಿನ್ನೆ ರಾಜ್ಯದಲ್ಲಿ ಒಟ್ಟು 7 ಲಕ್ಷ 3 ಸಾವಿರದ 364 ಮನೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.