ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವ ಎಸ್‌ಪಿಜಿ ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ (61) ನಿಧನರಾಗಿದ್ದಾರೆ.
ಕೇರಳದ ಉನ್ನತ ಐಪಿಎಸ್ ಅಧಿಕಾರಿ ಹಾಗೂ ಎಸ್‌ಪಿಜಿ ಮುಖ್ಯಸ್ಥರಾಗಿರುವ ಅರುಣ್ ಕುಮಾರ್ ಸಿನ್ಹಾ ಬುಧವಾರ ಗುರುಗ್ರಾಮದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಹಿತಿಯ ಪ್ರಕಾರ ಅರುಣ್ ಕುಮಾರ್ ಬಹಳ ದಿನಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರ ಸ್ಥಿತಿ ಹದಗೆಟ್ಟಿತ್ತು. ಈ ಹಿನ್ನೆಲೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಅರುಣ್ ಕುಮಾರ್ ಸಿನ್ಹಾ ಅವರು 1987ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು. ಅಂದಿನಿಂದ ಅನೇಕ ಪ್ರಮುಖ ಹುದ್ದೆಗಳನ್ನು ಅವರು ನಿಭಾಯಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿ ಎಸ್ ಪಿಜಿ ಜವಾಬ್ದಾರಿ ನೀಡಿತ್ತು. ಈ ವರ್ಷದ ಮೇ ತಿಂಗಳಿನಲ್ಲಿ ಅವರ ಅಧಿಕಾರಾವಧಿ ಮುಗಿಯಬೇಕಿತ್ತು, ಆದರೆ ಕೇಂದ್ರ ಸರ್ಕಾರ ಅವರ ಅವಧಿಯನ್ನು ವಿಸ್ತರಿಸಿತು.
ಸಿನ್ಹಾ ಅವರು ಜಾರ್ಖಂಡ್‌ನ ಹಜಾರಿಬಾಗ್ ನಿವಾಸಿ. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಐಪಿಎಸ್ ಅಸೋಸಿಯೇಷನ್ ಕೂಡ ಸಂತಾಪ ಸೂಚಿಸಿದೆ.