July 20, 2026
Monday, July 20, 2026
spot_img

ಹೊತ್ತಿ ಉರಿದ ‘ಸ್ಪಿರಿಟ್’ ಸಿನಿಮಾ ಸೆಟ್: ಹಲವರಿಗೆ ಗಾಯ, ಶೂಟಿಂಗ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸ್ಪಿರಿಟ್’ ಚಿತ್ರದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ಇಂದು ಬೆಳಗಿನ ಜಾವ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಸಿಬ್ಬಂದಿಗಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಟೆಂಟ್‌ಗಳು ಹಾಗೂ ಕೆಲವು ಚಿತ್ರೀಕರಣ ಸಾಮಗ್ರಿಗಳು ಹಾನಿಗೊಳಗಾಗಿವೆ. ಘಟನೆಯಲ್ಲಿ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್, ಅವಘಡ ಸಂಭವಿಸಿದ ಸಮಯದಲ್ಲಿ ಪ್ರಭಾಸ್ ಸೆಟ್‌ನಲ್ಲಿ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:

ಈ ಘಟನೆಯಿಂದ ಚಿತ್ರದ ಚಿತ್ರೀಕರಣಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ನಿರ್ಮಾಣ ತಂಡದಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !