ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿ: ಇಂದು ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮೊಣಕಾಲಿನ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ದಲೈ ಲಾಮಾ ಅವರ ವೈಯಕ್ತಿಕ ವೈದ್ಯ ಡಾ ತ್ಸೆಟನ್ ಡಿ ಸದುತ್‌ಶಾಂಗ್ ಮತ್ತು ದಲೈ ಲಾಮಾ ಅವರ ಕಾರ್ಯದರ್ಶಿ ಟೆಂಜಿನ್ ತಕ್ಲಾ ಅವರು ಶುಕ್ರವಾರ ಬೆಳಿಗ್ಗೆ ಅವರ ಸಂಪೂರ್ಣ ಮೊಣಕಾಲು ಶಸ್ತ್ರಚಿಕಿತ್ಸೆಯ ನಂತರ ದಲೈ ಲಾಮಾ ಅವರ ಸ್ಥಿತಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.

“ಇಂದು ಬೆಳಿಗ್ಗೆ ದಲೈ ಲಾಮಾ ಅವರ ಮೊಣಕಾಲಿನ ಶಸ್ತ್ರಚಿಕಿತ್ಸೆ ಬಹಳ ಯಶಸ್ವಿಯಾಗಿದೆ ಈಗ ಅವರ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ” ಎಂದು ತಿಳಿಸಿದ್ದಾರೆ.

ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಇಲ್ಲ ಎಂದು ದಲೈ ಲಾಮಾ ಅವರ ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!