ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಬಾಂಗ್ಲಾದೇಶದಲ್ಲಿ ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ದ್ವೇಷ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಶಿವಮೊಗ್ಗದ ಮಥುರಾ ಪ್ಯಾರಡೈಸ್ ಬಳಿ ನಡೆದ ಪ್ರತಿಭಟನೆಯಲ್ಲಿ ಈಶ್ವರಪ್ಪ ಪಾಲ್ಗೊಂಡಿದ್ದರು. ಈ ನಿಟ್ಟಿನಲ್ಲಿ ಕೋಮು ಭಾವನೆ ಕೆರಳಿಸಿ ದ್ವೇಷ ಹುಟ್ಟಿಸುವ ಉದ್ದೇಶದಿಂದ ಅನ್ಯ ಧರ್ಮದವರ ವಿರುದ್ಧ ಭಾಷಣ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.