ಹೊಸದಿಗಂತ ವರದಿ ಧಾರವಾಡ:
ನಗರದ ಡಾ. ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ ಟೂರ್ನಮೆಂಟ್ಗೆ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಶನಿವಾರ ಚಾಲನೆ ನೀಡಿದರು.
ಕ್ರೀಡಾಕೂಟ ಉದ್ಘಾಟಿಸಿ ಅರವಿಂದ ಬೆಲ್ಲದ, ಕ್ರೀಡೆಗಳು ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರ ಸೀಮಿತವಾಗಿರದೆ, ಮಾನಸಿಕ ಶಕ್ತಿ ಮತ್ತು ಶಿಸ್ತನ್ನು ಬೆಳೆಸಲು ನೆರವಾಗುತ್ತವೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯಬೇಕು ಎಂದರು.
ಇದನ್ನೂ ಓದಿ:
ಯುವಜನರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಧಾರವಾಡ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.



