ಹೊಸದಿಗಂತ ದಿಜಿಟಲ್ ಡೆಸ್ಕ್
ಭಾರತ ತಂಡವು ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್ ಗಳ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಆದರೆ ಇಷ್ಟೊಂದು ಭಾರೀ ಅಂತರದ ಗೆಲುವು ಸಾಧಿಸಿದರೂ ವಿಶ್ವ ಟೆಸ್ಟ್ ಚಾಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬಲಾಗಿಲ್ಲ. ಭಾರತವು ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿಯೇ ಮುಂದುವರೆದಿದೆ.
The latest #WTC23 standings after India’s big win in the first #INDvSL Test 👀 pic.twitter.com/ECmTOqQNvl
— ICC (@ICC) March 6, 2022
ಕಳೆದ ಬಾರಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಸಿದ್ದ ಭಾರತಕ್ಕೆ ಈ ಬಾರಿ ಅಂಕಪಟ್ಟಿಯಲ್ಲಿ ಮೇಲೇರಲು ದಕ್ಷಿಣ ಆಫ್ರಿಕಾ ಪ್ರವಾಸ ಮುಳುವಾಗಿದೆ. ಈ ಆವೃತ್ತಿಯ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ 2 ಟೆಸ್ಟ್‌ಗಳನ್ನು ಗೆದ್ದು, ಒಂದರಲ್ಲಿ ಸೋತಿದ್ದ ಭಾರತ, ಬಳಿಕ ತವರಿನಲ್ಲಿನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಜಯಬೇರಿ ಬಾರಿಸಿತ್ತು. ಮೊಹಾಲಿ ಟೆಸ್ಟ್ ಗೆಲುವಿನಿಂದ ಭಾರತ ೧೨ ಅಂಕ ಗಳಿಸಿದ್ದು, ಒಟ್ಟಾರೆ 10 ಟೆಸ್ಟ್ ಪಂದ್ಯಗಳಿಂದ 65 ಅಂಕಗಳನ್ನು ಕಲೆಹಾಕಿದೆ. ಆಸ್ಟ್ರೇಲಿಯಾ ಆಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಆಫ್ರಿಕಾ ತಂಡಗಳು ಕ್ರಮವಾಗಿ ನಂತರದ ಸ್ಥಾನದಲ್ಲಿವೆ. ಭಾರತ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಬೇಕಾದರೆ ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಅನಿವಾರ್ಯತೆಗೆ ಸಿಲುಕಿದೆ. ಮುಂದಿನ ವರ್ಷ ಭಾರತವು ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ , ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಎಲ್ಲಾ ಸರಣಿಗಳಲ್ಲಿ ಗೆಲುವು ಅನಿವಾರ್ಯವಾಗಿದೆ.