SPORTS | ಆರ್ಚರಿ ವಿಶ್ವಕಪ್ ಫೈನಲ್: ಬೆಳ್ಳಿಗೆ ತೃಪ್ತಿಪಟ್ಟ ದೀಪಿಕಾ ಬಳಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಆರ್ಚರಿ ವಿಶ್ವಕಪ್ ನಲ್ಲಿ ಭಾರತ ಮಹಿಳಾ ರಿಕರ್ವ್‌ ವಿಭಾಗದ ತಂಡವು ಸ್ಟೇಜ್ 3 ಟೂರ್ನಿಯಲ್ಲಿ ಬೆಳ್ಳಿ ಪದಕ ಜಯಿಸಿದೆ.
ದೀಪಿಕಾ ಕುಮಾರಿ, ಅಂಕಿತಾ ಭಕತ್‌ ಮತ್ತು ಸಿಮ್ರನ್‌ಜೀತ್ ಕೌರ್‌ ಅವರನ್ನೊಳಗೊಂಡ ತಂಡವು ಫೈನಲ್‌ನಲ್ಲಿ 1-5 ಪಾಯಿಂಟ್ಸ್‌ನಿಂದ ಚೀನಾ ತೈಪೆ ಆಟಗಾರ್ತಿಯರ ಎದುರು ಸೋಲು ಅನುಭವಿಸಿದರು.
ಈ ಮೂಲಕ ಭಾನುವಾರ ಕೊನೆಗೊಂಡ ಟೂರ್ನಿಯಲ್ಲಿ ಭಾರತ ಒಟ್ಟು ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿತು.
ಅಭಿಷೇಕ್‌ ವರ್ಮ ಮತ್ತು ಜ್ಯೋತಿ ಸುರೇಖಾ ವೆನ್ನಂ ಶನಿವಾರ ಕಾಂಪೌಂಡ್‌ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!