SPORTS | ನ್ಯೂಜಿಲ್ಯಾಂಡ್​ ವಿರುದ್ಧ ಸರಣಿ ಕ್ಲೀನ್​​ ಸ್ವೀಪ್​ ಮಾಡಿದ ಇಂಗ್ಲೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾಸಿ ನ್ಯೂಜಿಲ್ಯಾಂಡ್​ ವಿರುದ್ಧ ಮೂರನೇ ಹಾಗೂ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಗೆಲುವು ಸಾಧಿಸಿದ್ದು, ಟೆಸ್ಟ್​ ಸರಣಿಯಲ್ಲಿ 3-0 ಅಂತರದ ಕ್ಲೀನ್​​ ಸ್ವೀಪ್​ ಸಾಧನೆ ಮಾಡಿದೆ.
ನ್ಯೂಜಿಲ್ಯಾಂಡ್​ ನೀಡಿದ್ದ 296ರನ್​​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ತಂಡದ ಪರ ಅಬ್ಬರಿಸಿದ ಬೈರ್​​ ಸ್ಟೋ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಗೆಲುವಿಗೆ ಕಾರಣರಾದರು.
ಮೊದಲ ಇನ್ನಿಂಗ್ಸ್​​ನಲ್ಲಿ ನ್ಯೂಜಿಲ್ಯಾಂಡ್​ 329ರನ್​​​ಗಳಿಕೆ ಮಾಡಿ ಆಲೌಟ್​ ಆಗಿತ್ತು. ಇಂಗ್ಲೆಂಡ್ ತಂಡ ಸಹ 360ರನ್​​ಗಳಿಕೆ ಮಾಡಿ ಅಲ್ಪ ಮುನ್ನಡೆ ಪಡೆದುಕೊಂಡಿತ್ತು. ಎರಡನೇ ಇನ್ನಿಂಗ್ಸ್​​​ನಲ್ಲಿ 326ರನ್​​​ಗಳಿಗೆ ಕಿವೀಸ್ ಪಡೆ ಆಲೌಟ್​ ಆಗುವ ಮೂಲಕ 296ರನ್​​ಗಳ ಗುರಿ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!