ಭಾರತೀಯ ಮೂಲದ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮ್ಯಾಕ್ಸ್‌ ವೆಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಆಸ್ಟ್ರೇಲಿಯಾ ಹಾಗೂ ಆರ್ಸಿಬಿ ಸ್ಟಾರ್‌ ಆಟಗಾರ ಗ್ಲೇನ್‌ ಮ್ಯಾಕ್ಸ್‌ ವೆಲ್‌ ಭಾರತೀಯ ಮೂಲದ ವಿನಿ ರಾಮನ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್‌ ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಅವರು ವಿವಾಹವಾದರು. ಮ್ಯಾಕ್ಸ್‌ ವೆಲ್‌ ಮತ್ತು ತಮಿಳುನಾಡು ಮೂಲದ ವಿನಿ ರಾಮನ್‌ ಎರಡು ವರ್ಷಗಳಿಂದ ಡೇಟಿಂಗ್‌ ಮಾಡುತ್ತಿದ್ದರು. ವಿವಾಹದ ಕಾರಣಕ್ಕೆ ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಸರಣಿಯಿಂದ ಹೊರಗುಳಿದಿದ್ದ ಮ್ಯಾಕ್ಸ್‌ ವೆಲ್‌, ಇದೇ 26 ರಿಂದ ಆರಂಭಗೊಳ್ಳಲಿರುವ ಐಪಿಎಲ್‌ ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!