Sunday, December 4, 2022

Latest Posts

ಸ್ಟಾರ್‌ ಆಲ್ರೌಂಡರ್‌ ರವೀಂದ್ರ ಜಡೇಜಾ ಟೀಂ ಇಂಡಿಯಾ ಕಮ್‌ ಬ್ಯಾಕ್‌ ಯಾವಾಗ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮೊಣಕಾಲು ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಬಹುನಿರೀಕ್ಷಿತ ಪುನರಾಗಮನವನ್ನು ಮಾಡಲು ಸಿದ್ಧರಾಗಿದ್ದಾರೆ. ಜಡೇಜಾ ಗಾಯದ ಕಾರಣದಿಂದ ಏಷ್ಯಾ ಕಪ್‌ನಿಂದ ಹೊರಬಿದ್ದಿದ್ದರು. ಇದರಿಂದಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು ಮತ್ತು T20 ವಿಶ್ವಕಪ್‌ನಿಂದಲೂ ಹೊರಗುಳಿಯಬೇಕಾಯಿತು.
ರವೀಂದ್ರ ಜಡೇಜಾ ಅವರು ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಕ್ಕೆ ಕಮ್‌ ಬ್ಯಾಕ್‌ ಮಾಡಲಿದ್ದಾರೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಾಂಗ್ಲಾದೇಶ ವಿರುದ್ಧದ ಸರಣಿಗೆ ಸಂಪೂರ್ಣ ಬಲದ ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲೆಂಡ್ ಪ್ರವಾಸದಲ್ಲಿ ವಿಶ್ರಾಂತಿ ಪಡೆಯುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಮರಳಲಿದ್ದಾರೆ. ಜೊತೆಗೆ ಜಡೇಜಾ ಸಹ ತಂಡ ಸೇರಲಿದ್ದಾರೆ.
ಬಾಂಗ್ಲಾದೇಶ ಪ್ರವಾಸವು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದ್ದು, ಡಿಸೆಂಬರ್ 4, 7 ಮತ್ತು 10 ರಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಡಿಸೆಂಬರ್ 14  ಹಾಗೂ ಡಿಸೆಂಬರ್ 22 ರಂದು ಎರಡು ಟೆಸ್ಟ್‌ ಪಂದ್ಯಗಳನ್ನು ಉಭಯ ತಂಡಗಳು ಆಡಲಿವೆ.
ಬಾಂಗ್ಲಾ ಪ್ರವಾಸಕ್ಕೆ ಭಾರತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ಕೀಪರ್), ಇಶಾನ್ ಕಿಶನ್ (ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ , ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್
ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಾಕ್), ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!