ಶ್ರವಣಬೆಳಗೊಳ ಶಾಸಕರ ನಿವಾಸದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಮನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಅವರ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದ್ದು, ಚನ್ನರಾಯಪಟ್ಟಣದ ಜೋಳೇನಹಳ್ಳಿಯಲ್ಲಿ ಘಟನೆ ನಡೆದಿದೆ.

ಬಾಲಕೃಷ್ಣ ಅವರ ಕೊಬ್ಬರಿ ತುಂಬಿದ್ದ ಮನೆಗೆ ಬೆಂಕಿ ಬಿದ್ದು ಕಾರು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಶಾಸಕರ ಕೊಬ್ಬರಿ ತುಂಬಿದ್ದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!