ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಇಂದಿನ ಪಂದ್ಯ ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಸುತ್ತಿಗೆ ಪ್ರವೇಶಿಸಲು ಉಭಯ ತಂಡಗಳಿಗೆ ಇದು ಕೊನೆಯ ಅವಕಾಶ. ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯದ ವಿಜೇತರು ಭಾನುವಾರದ ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದ್ದಾರೆ.
ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.