ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಬಿಎಸ್ಎಫ್ ಸಿಬ್ಬಂದಿ ಸೇರಿ ಐವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಾಯಸಿಂಗ್ ಪಟ್ಟಣದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ.
ಕುಮ್ಹರ್ ಬಸ್ತಿಯಲ್ಲಿರುವ ದೂದ್ ಡೈರಿಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಆಕೆ ತುಪ್ಪವನ್ನು ಖರೀದಿಸಲು ಹಾಲಿನ ಡೈರಿಯತ್ತ ಹೋಗಿದ್ದಾಗ ಅಲ್ಲಿಗೆ ಬಂದ ವ್ಯಕ್ತಗಳು ಆಕೆಯನ್ನು ನಿರ್ಜನ ಸ್ಥಳವೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮುಚ್ಚಿದ ಕೋಣೆಯಲ್ಲಿ ಐದು ಜನರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಸಂತ್ರಸ್ತೆ ರಾಯಸಿಂಗ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆಯ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ ತಕ್ಷಣವೇ ತನಿಖೆ ಪ್ರಾರಂಭಿಸಲಾಗಿದ್ದು, ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಶನಿವಾರ ಬೆಳಿಗ್ಗೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಪ್ರಕರಣದಲ್ಲಿ ಸಿಬ್ಬಂದಿ ಭಾಗವಹಿಸಿದ ಬಗ್ಗೆ ಬಿಎಸ್ಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು, ನಂತರ ಅಧಿಕಾರಿಗಳು ತನಿಖೆಗಾಗಿ ಮೂವರು ಜವಾನರನ್ನು ಪೊಲೀಸರಿಗೆ ಹಸ್ತಾಂತರಿಸಿದರು. ತನಿಖೆ ನಡೆಯುತ್ತಿದೆ. ಆ ಬಳಿಕ ಕ್ರಮ ಕೈಗೊಳ್ಳಲಾಗುವುದುʼ ಎಂದು ರಾಯಸಿಂಗ್‌ ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಬನ್ವಾರಿ ಲಾಲ್ ಮೀನಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!