ಗಣಿನಾಡಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ವಿಶೇಷ ಪೂಜೆ

ಹೊಸದಿಗಂತ ವರದಿ, ಬಳ್ಳಾರಿ:
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶುಕ್ರವಾರ ಅತ್ಯಂತ ಸಂಭ್ರಮ, ಭಕ್ತಿಯಿಂದ ಆಚರಿಸಲಾಯಿತು.
ನಗರದ ಶ್ರೀಮದುತ್ತರಾಧಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ, ಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆ ಶ್ರೀಮಠದ ಕುಡಗೋಲು ಗೋಪಾಲಕೃಷ್ಣನಿಗೆ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ವಿಜೃಂಭಣೆಯಿಂದ ನಡೆದವು. ಆ.12ರಿಂದ 20ರ ವರೆಗೆ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸಂಜೆ ಶೇಷವಾಹನ, ಸಿಂಹವಾಹನ, ಗರುಡವಾಹನ, ವಾಯುವಾಹನ, ಗಜವಾಹನ, ಸೂರ್ಯಪ್ರಭಾ ವಾಹನ, ಚಂದ್ರಪ್ರಭಾ ವಾಹನ, ಪಲ್ಲಕ್ಕಿ ಉತ್ಸವ, ಸಂಜೆ ಬ್ರಹ್ಮತ್ಸೋತ್ಸವ ಸೇರಿ ವಿವಿಧ ಪೂಜೆಗಳು ಶ್ರೀಮಠದ ವ್ಯವಸ್ಥಾಪಕರಾದ ಪಂ.ನವೀನ್ ಆಚಾರ್, ಪ್ರವೀಣ್ ಆಚಾರ್ ಅವರ ನೇತೃತ್ವದಲ್ಲಿ ಅತ್ಯಂತ ವೈಭವದಿಂದ ನಡೆಯಿತು.
ನಗರದ ಕಪ್ಪಗಲ್ ರಸ್ತೆಯ ಶ್ರೀಕೃಷ್ಣ ಮಠದ, ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮೀ ಮಠ, ಸೇರಿದಂತೆ ಗೊಲ್ಲರ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು. ಇದಕ್ಕೂ ಮುನ್ನ ಶುಕ್ರವಾರ ಬೆಳಿಗ್ಗೆ ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ಬೃಹತ್ ಮೆರವಣಿಗೆ ಅತ್ಯಂತ ವೈಭವದಿಂದ ನಡೆಯಿತು. ಈ ಸಂದರ್ಭದಲ್ಲಿ ನಗರ ಶಾಸಕ ಸೋಮಶೇಖರ್ ರೆಡ್ಡಿ, ಗೊಲ್ಲರ ಸಂಘದ ಅಧ್ಯಕ್ಷ ಪಿ.ಗಾದೆಪ್ಪ, ಮಹಾನಗರ ಪಾಲಿಕೆ ಮೇಯರ್ ರಾಜೇಶ್ವರಿ ಸುಬ್ಬರಾಯಡು, ಸೇರಿದಂತೆ ಅನೇಕ ಗಣ್ಯರು, ಶ್ರೀಕೃಷ್ಣ ಭಕ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!