Tuesday, March 28, 2023

Latest Posts

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿಗಳಿಂದ ಶ್ರೀ ಲಕ್ಷ್ಮಿ ನಾರಾಯಣ ದೇಗುಲ ಧ್ವಂಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ ಮುಂದುವರಿದಿದೆ. ಇದೀಗ ಬ್ರಿಸ್ಪೇನ್‌ನ ಶ್ರೀ ಲಕ್ಷ್ಮಿ ನಾರಾಯಣ ದೇಗುಲದ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ಹಿಂದೂ ದೇಗುಲಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಎಂದಿನಂತೆ ಪೂಜೆಗೆ ಭಕ್ತರು ತೆರಳಿದಾಗ ಧ್ವಂಸವಾಗಿರುವುದನ್ನು ಗಮನಿಸಿದ್ದಾರೆ.

ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಇದರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೇವಾಲಯ ಸಿಬ್ಬಂದಿ ಆಗ್ರಹಿಸಿದ್ದಾರೆ. ಈ ಹಿಂದೆ ಬ್ರಿಸ್ಬೇನ್‌ನಲ್ಲಿ ಹಿಂದೂ ದೇಗುಲವಾದ ಗಾಯತ್ರಿ ಮಂದಿರಕ್ಕೆ ಖಲಿಸ್ತಾನಿಗಳಿಂದ ಬೆದರಿಕೆ ಕರೆ ಬಂದಿದ್ದವು. ಜನವರಿಯಲ್ಲಿ ವಿಕ್ಟೋರಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!