ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಬಳಿಕ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಶ್ರೀಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ವಜಾಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ.
1996ರ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ನೆವೆಂಬರ್ 2 ರಂದು ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 358 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಕೇವಲ 55 ರನ್‌ಗಳಿಗೆ ಸೋಲನನು ಕಂಡು, 302ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಹಾಗೆಯೇ ವಿಶ್ವಕಪ್‌ನಲ್ಲೂ ಇದೇ ರೀತಿಯ ಪ್ರದರ್ಶನ ಮುಂದುವರೆದ ಕಾರಣ ಕೆರಳಿದ್ದ ರಣಸಿಂಘೆ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ್ದಾರೆ. ಇದೀಗ ಮಧ್ಯಂತರ ಅಧ್ಯಕ್ಷರನ್ನಾಗಿ ಅರ್ಜುನ ರಣತುಂಗ ಅವರಿಗೆ ಅಧಿಕಾರ ನೀಡಲಾಗಿದೆ.