ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ತತ್ತರಿಸಿದ ಶ್ರೀಲಂಕಾ: ಅಧ್ಯಕ್ಷ ಗೋತಬಯ ರಾಜಪಕ್ಸ ಪರಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀಲಂಕಾದಲ್ಲಿ ದಿನೇ ದಿನೇ ಪ್ರತಿಭಟನೆ ಹೆಚ್ಚುತ್ತಿದ್ದು, ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಇದರ ನಡುವೆ ಗೋತಬಯ ರಾಜಪಕ್ಸ ಅವರ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಆರ್ಥಿಕ ಸಂಕಷ್ಟಕ್ಕೊಳಗಾಗಿ ಸಂಪೂರ್ಣ ತತ್ತರಿಸಿರುವ ಶ್ರೀಲಂಕಾದಲ್ಲಿ ಜನರು ಒಂದು ತುತ್ತು ಊಟಕ್ಕೂ ಪರದಾಡುತ್ತಿದ್ದು, ಓ ಕಾರಣ ಜನರು ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ.
ಕೊಲಂಬೊದಲ್ಲಿರುವ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿರುವ ಬೆನ್ನಲ್ಲೇ ಅವರು ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ನಿವಾಸದ ಸುತ್ತಲೂ ಸುತ್ತುವರೆದಿರುವ ಪ್ರತಿಭಟನಾಕಾರರು ಅವರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಅಧ್ಯಕ್ಷ ಗೋತಬಯ ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಅಧ್ಯಕ್ಷರ ನಿವಾಸದ ಎದುರು ಹಾಕಲಾಗಿದ್ದ ಬ್ಯಾರಿಕೇಡ್ ಮುರಿದು ಒಳ ನುಗ್ಗಿರುವ ಪ್ರತಿಭಟನಾಕಾರರು, ಗೋತಬಯ ರಾಜಪಕ್ಸ ಅವರ ನಿವಾಸ ಸಂಪೂರ್ಣವಾಗಿ ಹಿಡಿತಕ್ಕೆ ಪಡೆದುಕೊಂಡಿದ್ದಾರೆ. ಆದರೆ, ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ ಎನ್ನಲಾಗಿದೆ.

ಶ್ರೀಲಂಕಾದ ಧ್ವಜಗಳನ್ನ ಕೈಯಲ್ಲಿ ಹಿಡಿದು ಸಾವಿರಾರು ಪ್ರತಿಭಟನಾಕಾರರು ರಸ್ತೆಗಿಳಿದಿದ್ದು, ಅವರನ್ನ ನಿಯಂತ್ರಿಸಲು ಕರ್ಫ್ಯೂ ವಿಧಿಸಲಾಗಿದೆ. 1948ರ ಸ್ವಾತಂತ್ರ್ಯ ಬಳಿಕ ಶ್ರೀಲಂಕಾ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ದೀರ್ಘಾವಧಿಯ ವಿದ್ಯುತ್ ಕಡಿತ ಮತ್ತು ಇಂಧನ, ಆಹಾರ ಮತ್ತು ಇತರ ದೈನಂದಿನ ಅಗತ್ಯ ವಸ್ತುಗಳ ಕೊರತೆಗಾಗಿ ಜನರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷ ಗೋತಬಯ ರಾಜಪಕ್ಸ ಅವರು ತಮ್ಮ ಸರ್ಕಾರದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!