15 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಮುದ್ರ ಪ್ರದೇಶದಲ್ಲಿ ಎರಡು ಟ್ರಾಲರ್‌ಗಳಲ್ಲಿ ಮೀನುಗಾರಿಕೆ ಮಾಡುತ್ತಿದ್ದ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆಯು ಬಂಧಿಸಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ.

‘ಜುಲೈ 8ರ ರಾತ್ರಿ ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದ ಭಾರತೀಯ ಟ್ರಾಲರ್‌ಗಳನ್ನು ಹಿಡಿಯಲು ಶ್ರೀಲಂಕಾ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ವಿಶೇಷ ಕಾರ್ಯಾಚರಣೆ ನಡೆಸಿತು’ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 15 ಭಾರತೀಯರನ್ನು ಬಂಧಿಸಲಾಗಿದೆ.

ಇಲ್ಲಿಯವರೆಗೆ 2023ರಲ್ಲಿ, ಶ್ರೀಲಂಕಾ ನೌಕಾಪಡೆಯು 12 ಭಾರತೀಯ ಮೀನುಗಾರಿಕೆಗೆ ಬಳಸುವ ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದ್ದು ಈ ವರ್ಷ 74 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಬಂಧನದ ನಂತರ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಅವರನ್ನು ಹಸ್ತಾಂತರಿಸಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!