ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್​ ವಿಕ್ರಮಸಿಂಘೆ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ನಡುವೆ ನೂತನ ಪ್ರಧಾನಿಯಾಗಿ ರಾನಿಲ್​ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. 73 ವರ್ಷದ ವಿಕ್ರಮಸಿಂಘೆ ತಮ್ಮ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆಂದು ಅಲ್ಲಿನ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಳೆದ ಕೆಲ ತಿಂಗಳಿಂದ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ತುರ್ತು ಪರಿಸ್ಥಿತಿ ಹೇರಿದ ಮಧ್ಯೆಯೇ ದೇಶದ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
1977 ರಲ್ಲಿ ಬಿಯಾಗಾಮ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದ ಯುಎನ್​ಪಿ ಪಕ್ಷದ ರಾನಿಲ್ ವಿಕ್ರಮಸಿಂಘೆ, 1993 ರಿಂದ 1994 ಮತ್ತು 2001 ರಿಂದ 2004 ರವರೆಗೆ ಪ್ರಧಾನ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. 1994ರ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಸಮಯದಲ್ಲಿ ಗಾಮಿನಿ ದಿಸನಾಯಕ ಅವರ ಹತ್ಯೆಯ ನಂತರ ನವೆಂಬರ್ 1994 ರಲ್ಲಿ ಪಕ್ಷದ ನಾಯಕರಾಗಿ ಆಯ್ಕೆಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!