ಭಾರತ ವಿರುದ್ಧದ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ವಿರುದ್ಧದ ಟಿ20 ಸರಣಿಗಾಗಿ ಆತಿಥೇಯ ಶ್ರೀಲಂಕಾ 16 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಸರಣಿ ಆರಂಭಕ್ಕೂ ಮುನ್ನ ವನಿಂದು ಹಸರಂಗ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ನೂತನ ನಾಯಕನಾಗಿ ಚರಿತ್ ಅಸಲಂಕಾ ನೇಮಕಗೊಂಡಿದ್ದಾರೆ.

ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್​ ಯಾದವ್ ಸಾರಥ್ಯದಲ್ಲಿ ಆಡಲಿದೆ. ​ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದೆ.

34 ವರ್ಷದ ಅನುಭವಿ ಆಟಗಾರ ದಿನೇಶ್ ಚಂಡಿಮಲ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ಕಳೆದ ಟಿ20 ವಿಶ್ವಕಪ್​ ಆಡಿದ್ದ ಹಿರಿಯ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಕೈಬಿಡಲಾಗಿದೆ. ಏಕದಿನ ಸರಣಿಗೆ ಇನಷ್ಟೇ ತಂಡ ಪ್ರಕಟಗೊಳ್ಳಬೇಕಿದೆ.

ಶ್ರೀಲಂಕಾ ಟಿ20 ತಂಡ
ಚರಿತ್ ಅಸಲಂಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶಾನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಚಮಿಂದು ವಿಕ್ರಮಸಿಂಗ್, ಮಥೀಶ ಪತಿರಾಣ, ನುವಾನ್ ತುಷಾರ, ದುಷ್ಮಂತ ಚಮೀರ, ಬಿನೂರ ಫೆರ್ನಾಂಡೋ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!