ಲಂಕಾದಲ್ಲಿ ಹೆಚ್ಚಿದ ಸರ್ಕಾರಿ ವಿರೋಧಿ ಪ್ರತಿಭಟನೆ, ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ತುರ್ತು ಪರಿಸ್ಥಿತಿ ಘೋಷಣೆ ವಿಚಾರಕ್ಕೆ 5ವಾರಗಳ ಹಿಂದೆ ಪ್ರತಿಭಟನಾಕಾರರು ಅಧ್ಯಕ್ಷರ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು. ಆ ಸಮಯದಲ್ಲಿ ತುರ್ತು ಪರಿಸ್ಥಿತಿ ಆದೇಶಿಸಿ ವಾಪಸ್‌ ಪಡೆದಿದ್ರು. ದೇಶದಲ್ಲಿ ಮುಂದುವರೆದ ಪ್ರತಿಭಟನೆಗಳಿಂದ ಈಗ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಲಾಗಿದ್ದು, ಶುಕ್ರವಾರ ಮಧ್ಯರಾತ್ರಿಯಿಂದಲೇ ಆದೇಶ ಜಾರಿಗೆ ಬಂದಿದೆ.

ಶ್ರೀಲಂಕಾದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಸಾಮಾನ್ಯ ಜನರು ಕೂಡ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಹಾರ ಮತ್ತು ತೈಲ ಬೆಲೆಗಳು ಗಗನಕ್ಕೇರಿದ್ದು, ವಿದ್ಯುತ್ ಕಡಿತವನ್ನು ವಿರೋಧಿಸಿ ಜನರು ಬೀದಿಗಿಳಿಯುತ್ತಿದ್ದಾರೆ.

ಒಮ್ಮೆ ಸಾರ್ವಜನಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪರಿಸ್ಥಿತಿ ಪೊಲೀಸರ ಕೈ ಮೀರಿತು. ಈಗಂತೂ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿವೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜಪಕ್ಸೆ ಈ ಕಠಿಣ ತುರ್ತು ನಿರ್ಧಾರ ಕೈಗೊಂಡಿರುವಂತೆ ತೋರುತ್ತಿದೆ. ಈ ಬಾರಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಲು ಭದ್ರತಾ ಪಡೆಗಳಿಗೆ ಸಂಪೂರ್ನ ಅಧಿಕಾರ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!