ASIA CUP 2023 | ಪಾಕ್ ವಿರುದ್ಧ ಗೆದ್ದು ಫೈನಲ್ಸ್‌ಗೆ ಲಗ್ಗೆ ಇಟ್ಟ ಶ್ರೀಲಂಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶ್ರೀಲಂಕಾ ಭರ್ಜರಿ ಗೆಲುವು ಸಾಧಿಸಿದೆ.

ಪಾಕ್ 252 ರನ್‌ಗಳ ಬೃಹತ್ ಗುರಿಯನ್ನು ನೀಡಿದ್ದು, ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 252 ರನ್ ಗಳಿಸಿ 2 ವಿಕೆಟ್ ಅಂತರದ ವಿರೋಚಿತ ಗೆಲುವು ಸಾಧಿಸಿ ಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

ಕಡೆಯವರೆಗೂ ಪಂದ್ಯ ರೋಚಕವಾಗಿಯೇ ಉಳಿದಿದ್ದು, ಇನ್ನೇನು ಪಾಕಿಸ್ತಾನಕ್ಕೆ ಗೆಲುವು ಎನ್ನುವಷ್ಟರಲ್ಲಿ ಅಸಲಂಕಾ ಕೊನೆಯ ಎಸೆತದಲ್ಲಿ 2 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದಾರೆ. ಲಂಕಾ ಪಡೆ 12 ನೇ ಬಾರಿಗೆ ಏಷ್ಯಾಕಪ್ ಫೈನಲ್ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!