Tuesday, September 27, 2022

Latest Posts

ಲಂಕಾ-ಭಾರತ ಏಕದಿನ ಸರಣಿ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಭಾರತದ ವಿರುದ್ದದ 2 ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿದೆ.
ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಜಯಸಾಧಿಸಿದ್ದು,  ಈ ಪಂದ್ಯ ಗೆದ್ದರೆ ಸರಣಿ ಜಯ ದೊರಕಲಿದೆ. ಅಂತೆಯೇ ಲಂಕಾ ತಂಡಕ್ಕೆ ಮಾಡು ಇಲ್ಲವೆ ಮಡಿ ಪರಿಸ್ಥಿತಿ ಬಂದಿದ್ದು, ಗೆಲ್ಲುವ ತವಕ ಹೆಚ್ಚಾಗಿದೆ. ಈ ಪಂದ್ಯ ಗೆದ್ದು ಟೈ ಮಾಡುವ ಯೋಜನೆ ಲಂಕಾ ತಂಡಕ್ಕಿದೆ.
ಈ ಪಂದ್ಯದಲ್ಲಿ ಶ್ರೀಲಂಕ ತಂಡ ಒಂದು ಬದಲಾವಣೆ ಮಾಡಿದ್ದು, ಇಸುರು ಉದಾನಾ ಬದಲಾಗಿ ಕಸುನ್ ರಜಿತಾ ಪ್ಲೇಯಿಂಗ್ ಇಲವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಆರಂಭಿಕ ಜೋಡಿಯಾಗಿ ಶಿಖರ್ ಧವನ್ ಹಾಗೂ ಪೃಥ್ವಿ ಶಾ ಬ್ಯಾಟ್ ಬೀಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!