ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಲು ಸಜಿತ್ ಪ್ರೇಮದಾಸ್ ನಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಲೆದೋರಿರುವ ಆರ್ಥಿಕ ಬಿಕ್ಕಟ್ಟಿನಿಂದ, ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಆ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ನಾನು ಬರುವುದಿಲ್ಲ ಎಂದು ವಿರೋಧ ಪಕ್ಷದ ಸಮಗಿ ಜನ ಬಲವೇಗಯಾ (ಎಸ್‌ಜೆಬಿ) ನಾಯಕ ಸಜಿತ್ ಪ್ರೇಮದಾಸ್ ಸ್ಪಷ್ಟಪಡಿಸಿದ್ದಾರೆ. ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದುಬಂದಿರುವುದರಿಂದ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ SJB ರಾಷ್ಟ್ರೀಯ ಸಂಘಟಕ ತಿಸ್ಸಾ ಅಟ್ಸ್ನಾಯಕೆ, ಶ್ರೀಲಂಕಾದ ಮಾಧ್ಯಮದೊಂದಿಗೆ ಮಾತನಾಡುತ್ತಾ, ಪ್ರೇಮದಾಸ್ ಅವರು ಮಧ್ಯಂತರ ಸರ್ಕಾರದ ಪ್ರಧಾನ ಮಂತ್ರಿ‌ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಆದರೆ SJB ಮಧ್ಯಂತರ ಸರ್ಕಾರಕ್ಕೆ ಷರತ್ತುಬದ್ಧ ಬೆಂಬಲವನ್ನು ನೀಡುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!