ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ರೌಂಡರ್ 32 ವರ್ಷದ ತಿಸಾರ ಪೆರೇರಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಶ್ರೀಲಂಕಾ ಕ್ರಿಕೆಟ್ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದೆ.
ತಿಸಾರ ಪೆರೇರಾ 2009 ಡಿಸೆಂಬರ್ 24ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ ನಲ್ಲಿ 166 ಪಂದ್ಯಗಳನ್ನಾಡಿರುವ ಇವರು 2338ರನ್ ಗಳಿಸಿದ್ದಾರೆ. ಇದರಲ್ಲಿ 10 ಅರ್ಧಶತಕ ಹಾಗೂ 1 ಶತಕ ಸೇರಿವೆ, ಇನ್ನು ಬೌಲಿಂಗ್ನಲ್ಲೂ ಭರ್ಜರಿ ಪ್ರದರ್ಶನ ತೋರಿರುವ ತಿಸಾರ ಪೆರೇರಾ 175 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.