ಹೊಸದಿಗಂತ ವರದಿ,ಶಿರಸಿ:
ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಶ್ರೀ ಮಾರಿಕಾಂಬಾ ದ್ವೈವಾರ್ಷಿಕ ಜಾತ್ರಾ ಮಹೋತ್ಸವ ಪ್ರಸಕ್ತ ವರ್ಷ ಮಾ.೧೫ರಿಂದ ಮಾ.೨೩ರವರೆಗೆ ಜರುಗಲಿದೆ.
ನಗರದ ಮಾರಿಕಾಂಬಾ ದೇವಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಾತ್ರಾ ಮುಹೂರ್ತ ಘೋಷಣಾ ಸಭೆಯಲ್ಲಿ ವಿದ್ವಾನ್ ರಾಮಕೃಷ್ಣ ಭಟ್ಟ ಕೆರೇಕೈ ಮುಹೂರ್ತ ಘೋಷಿಸಿದರು. ಜಾತ್ರಾ ಮುಹೂರ್ತ ನಿಗದಿ ಆಗುತ್ತಿದ್ದಂತೆ ಸಂಪ್ರದಾಯದ ಪ್ರಕಾರ ನಾಡಿನ ಮನೆತನದ ಪ್ರಮುಖ ಅಜಯ್ ನಾಡಿಗ್ ದೇವಿ ಸಾನಿಧ್ಯದಲ್ಲಿ ದೀಪ ಬೆಳಗಿಸಿದರು. ನಂತರ ಸಭಿಕರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು.
ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ, ಧರ್ಮದರ್ಶಿಗಳಾದ ಸುಧೀರ ಹಂದ್ರಾಳ, ಶಿವಾನಂದ ಶೆಟ್ಟಿ, ವತ್ಸಲಾ ಹೆಗಡೆ, ಡಿಎಸ್ಪಿ ರವಿ ನಾಯ್ಕ, ತಹಸೀಲ್ದಾರ ಎಂ.ಆರ್.ಕುಲಕರ್ಣಿ, ಬಾಬುದಾರ ಪ್ರಮುಖರಾದ
ಅಜಯ ನಾಡಿಗ, ರಮೇಶ ದಬ್ಬೆ, ಮಂಜು ಕುರಬರ, ಬಸವರಾಜ ಚಕ್ರಸಾಲಿ ಇತರರಿದ್ದರು.