ಶ್ರೀರಾಮ ಮಂದಿರವು ಸ್ವಾಭಿಮಾನದ ಪ್ರತೀಕ: ಡಾ.ಸಿ.ಎನ್.ಅಶ್ವತ್ಥನಾರಾಯಣ್ 

ಹೊಸದಿಂಗತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀರಾಮ ಮಂದಿರವು ಸ್ವಾಭಿಮಾನದ ಪ್ರತೀಕ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು.

ಮಲ್ಲೇಶ್ವರದ 12ನೇ ಅಡ್ಡ ರಸ್ತೆಯಲ್ಲಿರುವ ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರು, ರಾಮಭಕ್ತರು ಎಲ್ಲಾ ದೇಗುಲಗಳು, ಮಂದಿರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ ಎಂದರಲ್ಲದೆ, ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.

ಅಯೋಧ್ಯೆ ಶ್ರೀರಾಮಮಂದಿರ ಪುನರ್ ನಿರ್ಮಾಣ ಆಗಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಹಬ್ಬದ ವಾತಾರವಣ ಇದೆ ಎಂದು ತಿಳಿಸಿದರು. 500 ವರ್ಷಗಳ ಕಾಲ ನಾವು ಅನ್ಯಾಯಕ್ಕೆ ಒಳಗಾಗಿದ್ದೆವು. ಎಲ್ಲಾ ಭಾರತೀಯರು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇತರ ಪಕ್ಷಗಳು ತಮ್ಮ ಕಾರ್ಯಕ್ರಮಗಳನ್ನು ಜನವರಿ 22ರ ಬಳಿಕ ಮಾಡಿದ್ದರೆ ಚೆನ್ನಾಗಿತ್ತು. ಇದಕ್ಕೆ ಜನತೆ ಸೂಕ್ತ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಭಾಷೆ ಮೇಲೆ ಹಿಡಿತ ಇರಬೇಕು. ತಪ್ಪಾದಾಗ ಅದನ್ನು ಸರಿಪಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಮೊದಲು ಏಕವಚನ ಬಳಕೆಗೆ ಸಂಬಂಧಿಸಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಕೇಸು ಹಾಕಿಸಿ ನಂತರ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕೇಸು ಹಾಕಲು ಹೇಳಬೇಕು ಎಂದು ಇದೇವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ. ನಾರಾಯಣಗೌಡ, ಕಾರ್ಯಕರ್ತರು, ರಾಮಭಕ್ತರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!