ಹೊಸದಿಗಂತ ಡಿಜಿಟಲ್ ಡೆಸ್ಕ್ :
ನಾಡಿನಾದ್ಯಂತ ಶ್ರೀ ರಾಮ ಹುಟ್ಟಿದ ದಿನವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೂಡ ಶ್ರೀರಾಮನವಮಿಯನ್ನು ಆಚರಿಸಲಾಯಿತು.
ಈ ವೇಳೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.