Wednesday, February 28, 2024

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ: ಜ.22 ರಂದು ಸಾರ್ವತ್ರಿಕ ರಜೆ ನೀಡುವಂತೆ ಸಿಎಂ ಗೆ ಶಾಸಕ ಯಶ್‌ಪಾಲ್‌ ಮನವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಇಡೀ ದೇಶವೇ ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕಾಯುತ್ತಿದ್ದು, ಎಲ್ಲೆಡೆ ಈಗ ಸಡಗರ.

ಜನವರಿ 22ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಅಗಲಿದ್ದು, ಆದ್ದರಿಂದ ರಾಮ ಮಂದಿರಕ್ಕೆ ಹೋಗಿಬರಲು ಹಾಗೂ ಎಲ್ಲರೂ ರಾಮ ಮಂದಿರ ಉದ್ಘಾಟನೆ ದಿನವನ್ನು ಹಬ್ಬವಾಗಿ ಆಚರಣೆ ಮಾಡಲು ಅನುಕೂಲ ಆಗುವಂತೆ ಜ.22 ರಂದು ಸಾರ್ವತ್ರಿಕ ರಜಾ ದಿನವೆಂದು ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರವನ್ನು ಬರೆದಿರುವ ಅವರು, ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ಜನವರಿ 22ರಂದು ನನಸಾಗುತ್ತಿದೆ. ಹಿಂದೂಗಳ ಶ್ರದ್ಧಾ ಭಕ್ತಿ ಕೇಂದ್ರವಾದ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯೊಂದಿಗೆ ಭವ್ಯ ರಾಮ ಮಂದಿರ ಉದ್ಘಾಟನೆ ಆಗುತ್ತದೆ. ಶ್ರೀರಾಮ ಮಂದಿರದ ಲೋಕಾರ್ಪಣೆಯು ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಈ ಪೂಜ್ಯ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ತೆಗಳು ಮತ್ತು ಮನೆ ಮನಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಸಂಕೀರ್ತನೆಗಳು ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಕೋಟ್ಯಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ.

ಆದ್ದರಿಂದ ಈ ರಾಮಮಂದಿರ ಲೋಕಾರ್ಪಣೆಯ ದಿನದಂದು ಶ್ರೀರಾಮ ದೇವರ ಸೇವೆಯಲ್ಲಿ ಪಾಲ್ಗೊಂಡು ಮತ್ತು ದೇವರ ಕೃಪೆಗೆ ಪಾತ್ರರಾಗಲು ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ದಿನಾಂಕ 22/01.2024ರ ಸೋಮವಾರ ಶಾಲಾ, ಕಾಲೇಜು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್‌ ಮತ್ತಿತರ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!