Wednesday, February 28, 2024

ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ: ಜ.22 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಂಭ್ರಮ ಮನೆ ಮಾಡಿದ್ದು,ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ.

ಇದರ ಭಾಗವಾಗಿ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ .

ಜೊತೆಗೆ ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.
ದೇವಾಲಯದ ಗರ್ಭಗುಡಿಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಸ್ಥಾಪಿಸುವ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಮತ್ತು ಹಲವಾರು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!