ಮುರುಘಾ ಮಠದ ಆಡಳಿತದಲ್ಲಿ ಶ್ರೀಗಳು ಹಸ್ತಕ್ಷೇಪ ಮಾಡಬಾರದು: ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹತ್ಯಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರ ಪೋಕ್ಸೋ ಪ್ರಕರಣದ ಕುರಿತು ವಿಚಾರಣೆ ಮಾಡಿದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯವು ಮುರುಘಾಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಮುರುಘಾ ಶ್ರೀ ಹಸ್ತಕ್ಷೇಪ ಮಾಡದಂತೆ ಆದೇಶ ಹೊರಡಿಸಿದೆ.

ಇಂದು ನ್ಯಾಯಾಲಯದಲ್ಲಿ ವಿಚಾರಣೆ ಮಾಡಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು, ಮುರುಘಾಮಠದ ಪೀಠಾದ್ಯಕ್ಷ, SJM ವಿದ್ಯಾಪೀಠದ ಅಧ್ಯಕ್ಷರಾಗಿರುವ ಮುರುಘಾಶ್ರೀಗಳು ಪ್ರಕರಣದ ವಿಚಾರಣೆ ಸಂಪೂರ್ಣ ಮುಗಿಯುವವರೆಗೆ ಮುರುಘಾಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು.

ಸರ್ಕಾರಿ ವಕೀಲೆ ನಾಗವೇಣಿಅವರು ಮಠದ ಪೀಠಾದ್ಯಕ್ಷ ಸ್ಥಾನದಿಂದ ಶ್ರೀಗಳ ವಜಾಕ್ಕೆ ವಾದ ಮಂಡಿಸಿದರು. ಆದರೆ, ಧಾರ್ಮಿಕ ಕೇಂದ್ರ ದುರ್ಬಳಕೆ 1988 ಕಾಯ್ದೆ ಅಳವಡಸಿದ ಹಿನ್ನೆಲೆಯಲ್ಲಿ ಶ್ರೀಗಳ ಪೀಠ ವಜಾ ಕುರಿತು ಯಾವುದೇ ಆದೇಶ ಹೊರಡಿಸಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!