ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರ ಗುಂಪು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ .
ಈ ವಿವಾದಕ್ಕೆ ಸಂಬಂಧಿಸಿದ 15 ಅರ್ಜಿಗಳ ಕುರಿತು ಜನವರಿ 11ರ ಹೈಕೋರ್ಟ್‌ನ ಆದೇಶವನ್ನು ಮರುಪರಿಶೀಲಿಸುವ ಮನವಿಯು ಪ್ರಶ್ನಿಸಲಾಗಿತ್ತು.ಅಕ್ಟೋಬರ್ 16ರಂದು ನ್ಯಾಯಾಲಯವು ಈ ವಿಷಯದ ಬಗ್ಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರ ಏಕ ಪೀಠವು ತೀರ್ಪು ನೀಡಿತು.
ಹಿಂದು ಮತ್ತು ಮುಸ್ಲಿಂ ಸಮುದಾಯಗಳಿಗೆ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿರುವ ವಿವಾದಿತ ಭೂಮಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಿಗೆ ಏಕೀಕೃತ ಕಾನೂನು ಪ್ರಕ್ರಿಯೆಗೆ ಅವಕಾಶ ನೀಡುವ ಮೂಲಕ ಜನವರಿಯ ಆದೇಶವು ಯಥಾಸ್ಥಿತಿಯಲ್ಲಿ ಉಳಿಯುತ್ತದೆ ಎಂದು ಹೈಕೋರ್ಟ್‌ನ ತೀರ್ಪು ಖಚಿತಪಡಿಸಿದೆ.