Friday, December 8, 2023

Latest Posts

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಕ್ಟೋಬರ್‌ 30ರೊಳಗೆ ದಾಖಲೆ ಪತ್ರ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಕ್ಟೋಬರ್‌ 30ರೊಳಗೆ ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆ ಪತ್ರಗಳನ್ನು ಖುದ್ದಾಗಿ ಸಲ್ಲಿಸುವಂತೆ ಅಲಹಾಬಾದ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಕಿಶನ್ ಕೌಲ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ವಿಚಾರಣೆ ವೇಳೆ ದಾಖಲೆಗಳನ್ನು ಸಲ್ಲಿಸಲು ವಿಳಂಬ ಮಾಡಿರುವುದನ್ನು ಗಮನಿಸಿ, ‘ನ್ಯಾಯಪೀಠ ನೀಡಿರುವ ಆದೇಶವನ್ನು ಆಡಳಿತ ವಿಭಾಗದಿಂದ ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಹಾಜರುಪಡಿಸಬೇಕಿದೆ. ಹಾಗಾಗಿ, ದಾಖಲೆಗಳನ್ನು ಸಲ್ಲಿಸುವಂತೆ ಹಿಂದಿನ ಆದೇಶ ಸಹಿತ ಮತ್ತೊಮ್ಮೆ ರಿಜಿಸ್ಟ್ರಾರ್‌ ಅವರ ಗಮನಕ್ಕೆ ತರಬೇಕು’ ಎಂದು ಸೂಚಿಸಿದರು.

ಈ ವಿವಾದ ಕುರಿತ ವಿಚಾರಣೆಯನ್ನು ಹೈಕೋರ್ಟ್‌ ಮೇ 26ರಂದು ಮಥುರಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಇದನ್ನು ಶಾಹಿ ಮಸೀದಿ ಈದ್ಗಾ ಆಡಳಿತ ಸಮಿತಿಯ ಟ್ರಸ್ಟ್‌, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!