ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಶ್ರೀಲಂಕಾಕ್ಕೆ ಬರುವ ಪ್ರಯಾಣಿಕರ ಸಂಖ್ಯೆಯ ಮೇಲೆ ನಿರ್ಬಂಧ ಹೇರಿದೆ.
ಒಂದು ವಿಮಾನದಲ್ಲಿ ಕೇವಲ 75 ಮಂದಿ ಪ್ರಯಾಣ ಮಾಡುವಂತೆ ನಾಗರೀಕ ವಿಮಾನಯಾನ ಪ್ರಾಧಿಕಾರ ಆದೇಹ ಹೊರಡಿಸಿದೆ. ಇಂದಿನಿಂದ 14 ದಿನಗಳ ಕಾಲ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದೆ.
ಶ್ರೀಲಂಕಾದಲ್ಲಿ ಕಳೆದ 24 ಗಂಟೆಗಳಲ್ಲಿ 1800 ಪ್ರಯಾಣಿಕರು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಈವರೆಗೂ 1,11,753 ಮಂದಿ ಸೋಂಕಿಗೆ ಗುರಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.