CINE | ಬಾಲಿವುಡ್‌ನ ಖ್ಯಾತ ನಿರ್ಮಾಪಕನ ಜೊತೆ ಶ್ರೀಲೀಲಾ ಫೋಟೊ, ಯಾವ ಸಿನಿಮಾ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡತಿ ಶ್ರೀಲೀಲಾ ‘ಪುಷ್ಪ 2’ನಲ್ಲಿ ಸೊಂಟ ಬಳುಕಿಸಿದ್ಮೇಲೆ ಬಾಲಿವುಡ್‌ನಿಂದ ಬಂಪರ್ ಆಫರ್ಸ್ ಅರಸಿ ಬರುತ್ತಿವೆ. ಇತ್ತೀಚೆಗೆ ಸಿದ್ಧಾರ್ಥ್ ಮಲ್ಹೋತ್ರಾಗೆ ಶ್ರೀಲೀಲಾ ನಾಯಕಿ ಎಂಬ ಸುದ್ದಿ ಹಬ್ಬಿತ್ತು.

ಈ ವಿಚಾರಕ್ಕೆ ಪುಷ್ಠಿ ನೀಡುವಂತಹ ಫೋಟೋವೊಂದು ಸಿಕ್ಕಿದೆ. ಸಿದ್ಧಾರ್ಥ್ ಸಿನಿಮಾವನ್ನು ನಿರ್ಮಿಸಲಿರುವ ನಿರ್ಮಾಪಕನ ಜೊತೆ ಶ್ರೀಲೀಲಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಶ್ರೀಲೀಲಾ ಅವರು ನಿರ್ಮಾಪಕ ಮಹಾವೀರ್ ಜೈನ್ ಜೊತೆ ಕಾಣಿಸಿಕೊಂಡಿದ್ದಾರೆ. ಇವರು ರಾಜ್ ಶಾಂಡಿಲ್ಯ ನಿರ್ದೇಶನ ಮಾಡುತ್ತಿರುವ ಮುಂದಿನ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಈ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರ ನಾಯಕ. ಇದೀಗ ವೈರಲ್ ಆಗಿರೋ ಫೋಟೋದಿಂದ ಶ್ರೀಲೀಲಾ ಅವರು ಸಿದ್ಧಾರ್ಥ್ ಮಲ್ಹೋತ್ರಾ ಚಿತ್ರದಲ್ಲಿ ನಟಿಸೋದು ಬಹುತೇಕ ಖಚಿತ ಆದಂತೆ ಕಾಣುತ್ತಿದೆ. ಮಹಾವೀರ್ ಜೈನ್  ಅವರು ಇನ್ಸ್ಟಾಗ್ರಾಂನಲ್ಲಿ ಶ್ರೀಲೀಲಾ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಚಾಲನೆ ಸಿಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!