October 15, 2026
Thursday, October 15, 2026
spot_img

ಶೃಂಗೇರಿ ಅಂಚೆ ಮತ ಮರು ಎಣಿಕೆ ಫಲಿತಾಂಶ ಕೂಡಲೇ ಘೋಷಿಸಿ: ಕೇಂದ್ರ ಸಚಿವ ಜೋಶಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಕುರಿತು ತಕ್ಷಣವೇ ಚುನಾವಣಾಧಿಕಾರಿ ಫಲಿತಾಂಶವನ್ನು ಘೋಷಿಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧ್ಯತೆ ಸ್ಪಷ್ಟವಾಗಿದೆ. ಈಗಾಗಲೇ ಮೂರು ವರ್ಷದಿಂದ ಶಾಸಕ ಸ್ಥಾನದಿಂದ ವಂಚಿತರಾಗಿದ್ದಾರೆ. ಹೀಗಾಗಿ ಕೂಡಲೇ ಫಲಿತಾಂಶ ಘೋಷಣೆ ಆಗಬೇಕು. ಒಂದು ವೇಳೆ ಸಮಸ್ಯೆಗಳು ಉಂಟಾದರೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚುನಾವಣಾಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಮಾನ್ಯ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಜೋಶಿ ಆಗ್ರಹಿಸಿದ್ದಾರೆ.

Must Read