ಬೌದ್ಧ ಧರ್ಮದ ವಿಧಿ-ವಿಧಾನದಂತೆ ನಡೆಯಿತು ಶ್ರೀನಿವಾಸ್‌ ಪ್ರಸಾದ್‌ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅನಾರೋಗ್ಯದಿಂದ ನಿಧನರಾದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿದಿ-ವಿಧಾನದಂತೆ ನೆರವೇರಿತು.

ಅಂತ್ಯಕ್ರಿಯೆ ವೇಳೆ ಬೆಂಗಳೂರಿನ ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನೆರವೇರಿತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!