ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮೂಲದ ಉದ್ಯಮಿ ಹಾಗೂ ಲೇಖಕರೂ ಆಗಿರುವ ಶ್ರೀರಾಮ್ ಕೃಷ್ಣನ್ ಅವರನ್ನು ಶ್ವೇತಭವನದ ಕೃತಕ ಬುದ್ಧಿಮತ್ತೆ ವಿಭಾಗದ ನೀತಿ ಸಲಹೆಗಾರರನ್ನಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ. ಈ ಮೂಲಕ ಟ್ರಂಪ್ ಬಳಗ ಸೇರಿದ 3ನೇ ಭಾರತೀಯ ಶ್ರೀರಾಮ್ ಕೃಷ್ಣನ್ ಆಗಿದ್ದಾರೆ.
ಶ್ರೀರಾಮ್ ಕೃಷ್ಣನ್ ಅವರು ಶ್ವೇತಭವನದ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ (ವೈಟ್ ಹೌಸ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಪಾಲಿಸಿ) ಕಚೇರಿಯಲ್ಲಿ ಕೃತಕ ಬುದ್ಧಿಮತ್ತೆಯ ಹಿರಿಯ ನೀತಿ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಟ್ರಂಪ್ ಭಾನುವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ