Tuesday, March 21, 2023

Latest Posts

ಉಕ್ರೇನ್ ನಿಂದ ಭಾರತಕ್ಕೆ ಆಗಮಿಸಿದ ಬಳ್ಳಾರಿಯ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಬಳ್ಳಾರಿ:

ಉಕ್ರೇನ್ ನಿಂದ ಭಾರತಕ್ಕೆ ಸುರಕ್ಷಿತವಾಗಿ ಆಗಮಿಸಿದ ಬಳ್ಳಾರಿಯ ವಿದ್ಯಾರ್ಥಿಗಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಭಾನುವಾರ
ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲಿನ ಪರಿಸ್ಥಿತಿ ಹಾಗೂ ಎದುರಾದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಂದ ಸಚಿವರು ಮಾಹಿತಿ‌ ಪಡೆದರು. ಈ ಸಂದರ್ಭದಲ್ಲಿ ನಗರದ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ, ಬೂಡಾ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ಮಾಜಿ ಸಂಸದರಾದ ಸಣ್ಣ ಫಕೀರಪ್ಪ, ಜೆ.ಶಾಂತಾ, ವೀರಶೇಖರ್ ರೆಡ್ಡಿ, ಕೃಷ್ಣಾರೆಡ್ಡಿ, ಸೇರಿದಂತೆ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!