Monday, October 20, 2025

ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಚಾಲನೆ ಸಿಗಲಿದೆ.

ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ಮಧ್ಯಾಹ್ನ 2:30 ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಉದ್ಘಾಟನೆ ನೆರವೇರಿಸಲಿದ್ದಾರೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. 

ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಮೈಸೂರು ದಸರಾಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಇಲ್ಲಿನ ಬನ್ನಿ ಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದ ವರೆಗೆ ಮೆರವಣಿಗೆ ಸಾಗಲಿದೆ.

ಇನ್ನೂ ಜಂಬೂ ಸವಾರಿಗೆ ವಿವಿಧ ಕಲಾತಂಡಗಳ ಸಾಂಸ್ಕೃತಿಕ ವೈಭವ ಮೆರುಗು ನೀಡಲಿದೆ. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿ ನಡೆಯಲಿದೆ

error: Content is protected !!