ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಬೆಳಿಗ್ಗೆ, ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ದೋಮಲಪೆಂಟಾ ಬಳಿ 14 ಕಿ.ಮೀ. ದೂರದಲ್ಲಿ ನಿರ್ಮಾಣ ಹಂತದಲ್ಲಿರುವ ಎಸ್ಎಲ್ಬಿಸಿ ಸುರಂಗ ಕುಸಿದಿದ್ದು, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ಪಡೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಸುರಂಗದೊಳಗೆ ಎಂಟು ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಿಕ್ಕಿಬಿದ್ದ ಕಾರ್ಮಿಕರ ಸ್ಥಿತಿ ಅಥವಾ ನಿಖರವಾದ ಸ್ಥಳವನ್ನು ಖಚಿತಪಡಿಸುವುದು ಕಷ್ಟಕರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸ್ತುತ ಸುರಂಗದೊಳಗೆ ಸಂಗ್ರಹವಾದ ನೀರನ್ನು ಹೊರತೆಗೆಯಲು ವಿಪತ್ತು ಪಡೆ ಕೆಲಸ ಮಾಡುತ್ತಿದೆ. 11 ರಿಂದ 13 ಕಿ.ಮೀ ನಷ್ಟು ಭಾಗ ನೀರಿನಿಂದ ತುಂಬಿದ್ದು, ಮೊದಲು ನೀರು ಹೊರಹಾಕುವ ಪ್ರತಿಕ್ರಿಯೆ ನಡೆಯುತ್ತಿದ್ದು, ಅದು ಮುಗಿದ ಬಳಿಕ, ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತದೆ ಎಂದು ತಿಳಿದು ಬಂದಿದೆ.