ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಭರ್ಜರಿ ಉದ್ಯೋಗಾವಕಾಶ..7 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 7000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸಿಎ, ಸಿಎಂಎ, ಎಂಬಿಎ, ಎಂ.ಕಾಂ, ಕಾನೂನು ಪದವಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಅಥವಾ ಚಲನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 3,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!