ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ದಿಂದ ಕೇಂದ್ರ ಪೊಲೀಸ್ ಇಲಾಖೆಯಲ್ಲಿ 1876 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ದೆಹಲಿ ಪೊಲೀಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ (ಸಿಎಪಿಎಫ್)ಗೆ ಈ ಹುದ್ದೆಗಳನ್ನು ನೇಮಕಾತಿ ಮಾಡಲಾಗುವುದು.
ಹುದ್ದೆಗಳ ವಿವರ:
ದೆಹಲಿ ಪೊಲೀಸ್ನಲ್ಲಿ ಸಬ್ ಇನ್ಸ್ಪೆಕ್ಟರ್ -162 ಹುದ್ದೆಗಳು
ಸಿಎಪಿಎಫ್ನಲ್ಲಿ ಸಬ್ ಇನ್ಸ್ಪೆಕ್ಟರ್ – 1714 ಹುದ್ದೆಗಳು
ಒಟ್ಟು 1876 ಹುದ್ದೆಗಳು
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 25 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಕಾರ್ಯಕ್ಷಮತೆ ಮತ್ತು ಸಂಪೂರ್ಣ ವೈದ್ಯಕೀಯ ಪರೀಕ್ಷೆ ಜೊತೆಗೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಜುಲೈ 22 ರಿಂದ ಆಗಸ್ಟ್ 15,2023ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.